ಮುರಾರ್ಜಿ ದೇಸಾಯಿ ವಸತಿ ಶಾಲೆಯ ಕಿರು ಪರಿಚಯ: ಮುರಾರ್ಜಿ ದೇಸಾಯಿ ವಸತಿ ಶಾಲೆಯು ಇದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ಒಂದು ವಸತಿ ಶಾಲೆಯಾಗಿದೆ.
ರಾಜ್ಯದಲ್ಲಿ ವಿವಿಧ ವರ್ಗಗಳ ಗ್ರಾಮೀಣ ಪ್ರದೇಶದ ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗಾಗಿ & ಎಲ್ಲಾ ವರ್ಗಗಳ ವಸತಿ ಶಾಲೆಗಳನ್ನು ಒಂದೇ ಸಂಸ್ಥೆಯ ಕಾರ್ಯವ್ಯಾಪ್ತಿಗೆ ಒಳಪಡಿಸುವ ಉದ್ದೇಶದಿಂದ 1999 ರಲ್ಲಿ ಸರ್ಕಾರವು ‘ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ’ವನ್ನು ಪ್ರಾರಂಭಿಸಲಾಗಿದೆ.
ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮುಖ್ಯ ಉದ್ದೇಶಗಳು ಯಾವವು?
ಮುರಾರ್ಜಿ ದೇಸಾಯಿ ವಸತಿ ಶಾಲೆ ಮುಖ್ಯ ಉದ್ದೇಶ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಸತಿ ಸಹಿತ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ವತಿಯಿಂದ 807 ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ/ಅಟಲ್ ಬಿಹಾರಿ ವಾಜಪೇಯಿ/ಶ್ರೀ ನಾರಾಯಣ ಗುರು ಇತ್ಯಾದಿ ಹೆಸರಿನಿಂದ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ
RMS (ರಾಷ್ಟ್ರೀಯ ಮಿಲಿಟರಿ ಸ್ಕೂಲ್) ಇದನ್ನು ಯಾರು ನಿರ್ವಹಣೆ ಮಾಡುತ್ತಾರೆ?
RMS(ರಾಷ್ಟ್ರೀಯ ಮಿಲಿಟರಿ ಸ್ಕೂಲ್) ಇದನ್ನು ರಕ್ಷಣಾ ಇಲಾಖೆ ನಿರ್ವಹಣೆ ಮಾಡುತ್ತದೆ.
ವಿಶೇಷ ಸೂಚನೆ: ಅಧಿಕೃತ ಮಾಹಿತಿಗಾಗಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಅಫೀಸಿಯಲ್ ವೆಬ್ ಸೈಟಿಗೆ ಭೇಟಿ ನೀಡಿ.
ನವೋದಯ, ಸೈನಿಕ್, RMS, ಮುರಾರ್ಜಿ ಪ್ರವೇಶ ಪರೀಕ್ಷೆಯ ತರಬೇತಿ